ಅಭಿಪ್ರಾಯ / ಸಲಹೆಗಳು

ಮಾಹಿತಿ ಹಕ್ಕು 4 (1) (ಬಿ)

ಮಾಹಿತಿಹ​ಕ್ಕು​ 4(1)B​ 

ಕಾಯ್ದೆಯ ಬಗ್ಗೆ 

 

ಈ ಅಧಿನಿಯಮವನ್ನು ಅಧಿನಿಯಮಿತಿಗೊಳಿಸಿದ ದಿನಾಂಕದಿಂದ ಒಂದುನೂರ ಇಪ್ಪತ್ತುದಿನಗಳೊಳಗಾಗಿ-​​

 

  1. ಅದರ ರಚನೆಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳನ್ನು;
  2. ಅದರ ಅಧಿಕಾರಿಗಳ ಮತ್ತು ನೌಕರರ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು;
  3. ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ ತೀರ್ಮಾನತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನವನ್ನು;
  4. ಅದರಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವ ಸೂತ್ರಗಳನ್ನು;
  5. ಅದರ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ಅಥವಾ ಅದರ ಉದ್ಯೋಗಿಗಳು ಬಳಸುವ ನಿಯಮಗಳುವಿನಿಯಮಗಳುಅನುಸೂಚಿಗಳುಕೈಪಿಡಿಗಳು ಮತ್ತು ದಾಖಲೆಗಳನ್ನು;
  6. ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳ ವಿವರಪಟ್ಟಿಯನ್ನು;
  7. ಅದರ ಕಾರ್ಯನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ  ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅವರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂಥ ಯಾವುದೇ ವ್ಯವಸ್ಥೆಯ ವಿವರಗಳನ್ನು;
  8. ಮಂಡಳಿಗಳುಪರಿಷತ್ತಗಳುಸಮಿತಿಗಳು ಅಥವಾ ಇತರ ನಿಕಾಯಗಳು ಮತ್ತು ಅದರ ಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳಪರಿಷತ್ತುಗಳಸಮಿತಿಗಳ ಮತ್ತು ಇತರ ನಿಕಾಯಗಳ ಸಭೆಗಳು ಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡಾವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರ ವಿವರಪಟ್ಟಿಕೆಯನ್ನು;
  9. ಅದರ ಅಧಿಕಾರಿಗಳ ಮತ್ತು ನೌಕರರ ನಿರ್ದೇಶಿಕೆಯನ್ನು;
  10. ಅದರ ವಿನಿಯಮಗಳಲ್ಲಿ ಉಪಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯೂ ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನವನ್ನು;
  11. ಎಲ್ಲ ಯೋಜನೆಗಳ ವಿವರಗಳನ್ನು ಸೂಚಿಸುವಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯವನ್ನು,
  12. ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡುಸಹಾಯಧನ ಕಾರ್ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳನ್ನು;
  13. ಅದು ನೀಡಿರುವ ರಿಯಾಯಿತಿಗಳನ್ನುಅನುಮತಿ ಪತ್ರಗಳನ್ನುಅಥವಾ ಅಧಿಕಾರ ಪತ್ರಗಳನ್ನು ಪಡೆಯುವವರ ವಿವರಗಳನ್ನು;
  14. ಅದರ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ,ಮಾಹಿತಿಗೆ ಸಂಬಂಧಿಸಿದ ವಿವರಗಳನ್ನು;
  15. ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನುನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದ ಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ವಿವರಗಳನ್ನು;
  16. ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳುಪದನಾಮಗಳು ಮತ್ತು ಇತರ ವಿವರಗಳನ್ನು;

        ನಿಯಮಿಸ ಬಹುದಾದಂತಹ ಇತರ ಮಾಹಿತಿಯನ್ನು ಪ್ರಕಟಿಸತಕ್ಕದ್ದು ಮತ್ತು ಆ ತರುವಾಯ ಪ್ರತಿವರ್ಷ ಈ ಪ್ರಕಟಣೆಗಳನ್ನು ಅಂದಿನವರೆಗೆ ಪರಿಷ್ಕರಿಸತಕ್ಕದ್ದು.

 

ಮಾಹಿತಿಹಕ್ಕು​ 4(1)B ವಿವರ :

 

ಕ್ರ.ಸಂ

ವಿಷಯ

ದಿನಾಂಕ

ಭಾಷೆ

ಕಡತದಮೂಲ

ಗಾತ್ರ

ಡೌನ್ಲೋಡ್

1

ಖಾಮಂ/2021-22

25-07-2022

ಕನ್ನಡ

ಪಿಡಿಎಫ್‌

 7.29 MB

ಡೌನ್ಲೋಡ್

2

ಖಾಮಂ/2022-23

20-09-2023

ಕನ್ನಡ

ಪಿಡಿಎಫ್‌

 1.22 MB

ಡೌನ್ಲೋಡ್

ಇತ್ತೀಚಿನ ನವೀಕರಣ​ : 25-09-2023 10:42 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080